1/19/2019

ದೇಶ | ವಿದೇಶ ವಿವರ ಪುಟ

ಕೃಷ್ಣ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಜ.17ರಿಂದ ಪಾದಯಾತ್ರೆ ಆರಂಭ - ಸಿಂಗನಾಳ

Font size -16+

'ಸುದ್ದಿಮೂಲ ವಾರ್ತೆ, ಗಂಗಾವತಿ, ಜ.13
ರಾಜ್ಯ ಕಾಂಗ್ರೆಸ್ ಸರಕಾರ ಸುಳ್ಳು ಭರವಸೆ ನೀಡುತ್ತಾ ಕಾರ್ಯರೂಪಕ್ಕೆ ತರುವಲ್ಲಿ ವಿಳಂಬಗೊಳಿಸಿದ ಕೃಷ್ಣ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ನೇತ್ರತ್ವದಲ್ಲಿ ಜ.17ರಿಂದ 20ರವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ ಹೇಳಿದರು.
ಕೊಪ್ಪಳ ತಾಲೂಕಿನ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇರಕಲ್‌ಗಡದ ರುದ್ರಸ್ವಾಮಿ ಕಲ್ಯಾಣ ಮಂಟದಲ್ಲಿ ನಡೆದ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಅನುಕೂಲಕ್ಕಾಗಿ ಕೊಪ್ಪಳ ಜಿಲ್ಲೆಗೆ ಕೃಷ್ಣಾ ಬಿ.ಸ್ಕೀಂ ಹಾಗೂ ಏತ ನೀರಾವರಿ ಯೋಜನೆ ಜಾರಿ ಮಾಡಲಾಗಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾಮಗಾರಿ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ತಾಳಿದೆ.
ಸಿ.ಎಂ ಸಿದ್ದರಾಮಯ್ಯ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸುಳ್ಳು ಭರವಸೆ ನೀಡುವ ಮೂಲಕ ಕಾಲಹರಣ ಮಾಡುತ್ತಿದ್ದಾರೆ.
ಈ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಲು ಒತ್ತಾಯಿಸಿ ಬೃಹತ್ ಪಾದಯಾತ್ರೆ ಮೂಲಕ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ,ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು,ಪಕ್ಷದ ಕಾರ್ಯಕರ್ತರು,ಈ ಯೋಜನೆ ವ್ಯಾಪ್ತಿಯ ಎಲ್ಲ ಗ್ರಾಮಗಳ ರೈತ ಮುಖಂಡರು ಈ ಪಾದಯಾತ್ರೆಯಲ್ಲಿ ಭಾಗವಹಿಸಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಬೇಕೆಂದು ಎಂದು ಕೋರಿದರು.
ಬಿಜೆಪಿ ಮುಖಂಡ ತಿಪ್ಪೇರುದ್ರಸ್ವಾಮಿ, ಶರಣು ತಾಳಿಕೇರಿ, ರಾಮಣ್ಣ ಚೌಡ್ಕಿ, ಗವಿಸಿದ್ದಪ್ಪ ಕರಡಿ, ಶಿವರಾಜಗೌಡ, ನವೀನ ಗುಳಗಣ್ಣನವರು, ಮಂಜುನಾಥ ಗೊಂದಿ, ಶಿವು ಹಡಪದ, ವೀರಬಸಪ್ಪ, ಉಮೇಶ ಸಜ್ಜನ್, ವಿರುಪಾಕ್ಷಪ್ಪ ಬಾರಕೇರ್, ಸುರೇಶಪ್ಪ, ಬಸವರಾಜ, ಈಶ್ವರಗೌಡ, ಶರಣಪ್ಪ, ಗಂಗಣ್ಣ, ಸಿದ್ದರಾಮಯ್ಯಸ್ವಾಮಿ, ಯಮನಪ್ಪ ವಿಠಲಾಪೂರ, ಉದಯ ಚಿತ್ರಗಾರ, ಶಿವಪ್ಪ ಕೊಡದಾಳ ಸೇರಿದಂತೆ ಇನ್ನಿತರರಿದ್ದರು.'