9/18/2019

ದೇಶ | ವಿದೇಶ ವಿವರ ಪುಟ

ನಾನು ಗುಮಾಸ್ತನಂತೆ ಕೆಲಸ ಮಾಡಿದೆ : ಹೆಚ್‌ಡಿಕೆ

Font size -16+

'ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.25
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲು ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ವೆಬ್‌ಸೈಟ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ತಮಗೆ ಹೆಸರಿಗಷ್ಟೇ ಮುಖ್ಯಮಂತ್ರಿ ಹುದ್ದೆ ಇತ್ತು. ಆದರೆ, ಸರ್ಕಾರಿ ಕಚೇರಿ ಯಲ್ಲಿ ಮೊದಲ ದರ್ಜೆ ಗುಮಾಸ್ತನ ರೀತಿ ಕೆಲಸ ಮಾಡಿದ್ದೆ. ಸಿದ್ದರಾಮ ಯ್ಯ ಅವರು ಮತ್ತೇ ಮುಖ್ಯಮಂ ತ್ರಿಯಾಗಬೇಕೆಂದು ಕನಸು ಕಾಣುತ್ತಿ ದ್ದಾರೆ. ಉದ್ದೇಶ ಪೂರ್ವಕವಾಗಿಯೇ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಸರ್ಕಾರ ಪತನಗೊಳಿಸಿದ್ದಾರೆ. ಒಂದು ವೇಳೆ ಯಡಿಯೂ ರಪ್ಪ ಅವರು ಸರ್ಕಾರ ನಡೆಸಲು ವಿಲರಾಗಿ ಸರ್ಕಾರ ಪತನಗೊಂಡರೆ ಮತ್ತೇ ತಾವೇ ಮುಖ್ಯಮಂತ್ರಿಯಾ ಗಬಹುದು ಎಂಬ ಲೆಕ್ಕಚಾರದಲ್ಲಿ ಸಿದ್ದರಾಮಯ್ಯ ದೂರ ಗಾಮಿ ತಂತ್ರಗಾರಿಕೆ ಹೆಣೆದಿದ್ದಾರೆ ಎಂದು ಕುಮಾರ ಸ್ವಾಮಿ ಹೇಳಿದ್ದಾರೆ.
ಮೊದಲ ಶತೃ ಸಿದ್ದರಾಮಯ್ಯ: ಸಿದ್ದರಾಮಯ್ಯ ಅವರೇ ನನ್ನ ಮೊದಲ ಶತ್ರು, ಬಿಜೆಪಿಯಲ್ಲ ಎಂದು ಕುಮಾರಸ್ವಾಮಿ ಹೇಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ತಮ್ಮೊಳಗೆ ಕುದಿಯುತ್ತಿದ್ದ ಆಕ್ರೋಶ ಕಾರಿಕೊಂಡಿದ್ದಾರೆ.
ಕಳೆದ 14 ತಿಂಗಳ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡ ಕಳೆದ ಮೂರು ದಿನಗಳಿಂದ ನಿರಂತರವಾಗಿ ಆರೋಪಿಸುತ್ತಿದ್ದಾರೆ. ಇದರ ಬೆನ್ನಲ್ಲೆ ಅವರ ಪುತ್ರ ಕುಮಾರಸ್ವಾಮಿ ಅವರು ಸಹ ಸಿದ್ದರಾಮಯ್ಯ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.
ಸಿದ್ಧರಾಮಯ್ಯ ವಿರುದ್ಧ ಇದೇ ಮೊದಲ ಬಾರಿಗೆ ನೇರವಾಗಿ ಆರೋಪಗಳ ಸುರಿಮಳೆ ಗೈದಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದನ್ನು ಮೊದಲಿನಿಂದಲೂ ಸಹಿಸಿಕೊಳ್ಳಲಾಗದ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರನ್ನು ಮೈತ್ರಿ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಸರ್ಕಾರದ ಪತನಕ್ಕೆ ಕಾರಣರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈತ್ರಿ ಸರ್ಕಾರ ಮುಂದುವರಿಯಬೇಕೆಂಬುದು ಕಾಂಗ್ರೆಸ್ ಹೈಕಮಾಂಡ್ ಆಶಯವಾಗಿತ್ತು. ಆದರೆ, ಸರ್ಕಾರ ಮುಂದುವರಿಯುವುದು ಸಿದ್ದರಾಮಯ್ಯ ಅವರಿಗೆ ಸ್ವಲ್ಪವೂ ಇಷ್ಟವಿಲ್ಲ. ಪ್ರತಿನಿತ್ಯ ಸರ್ಕಾರ ಪತನಗೊಳಿಸಲು ಪ್ರಯತ್ನಿಸುತ್ತಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಕೆಳಗೆ ಇಳಿಸಲು ಕುತಂತ್ರ ರಾಜಕಾರಣ ಮಾಡಿದರು ಸಿದ್ದರಾಮಯ್ಯ ಎಂದು ನೇರ ಆರೋಪ ಮಾಡಿದ್ದಾರೆ.
ಮೈರ್ತಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ನೇರ ಹೊಣೆ ಎಂಬ ದೇವೇಗೌಡರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸರ್ಕಾರದ ಪತನಕ್ಕೆ ದೇವೇಗೌಡ, ಕುಮಾರಸ್ವಾಮಿ ಹಾಗೂ ಎಚ್.ಡಿ ರೇವಣ್ಣ ಅವರೇ ಕಾರಣ. ಸರ್ಕಾರ ಉರುಳುವಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಸಮರ್ಥಿಸಿಕೊಂಡಿದ್ದರು.
ಮುಖ್ಯಮಂತ್ರಿಯಾಗಿ ನಾನು ಕೈಗೊಂಡ ಕೆಲವು ತೀರ್ಮಾನಗಳನ್ನು ಸಹಿಸಿಕೊಳ್ಳದೆ ಸರ್ಕಾರ ಪತನಕ್ಕೆ ನಿರಂತರ ಪ್ರಯತ್ನ ಮಾಡಿದ್ದರು. ದೂರವಾಣಿ ಕದ್ದಾಲಿಕೆ ಪ್ರಕರಣ ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಿರುವುದರ ಹಿಂದೆ ಸಿದ್ದರಾಮಯ್ಯ ಅವರ ಕರಾಮತ್ತು ಇದೆ ಎಂದು ದೂರಿದ್ದಾರೆ.
ಅತೃಪ್ತ ಶಾಸಕರು ಮೈತ್ರಿ ಸರ್ಕಾರದ ಅವಧಿಯಲ್ಲಿ ಬೆಂಬಲ ನೀಡಲು ಮುಂದಾಗಿದ್ದರೂ ಸಿದ್ದರಾಮಯ್ಯ ಅದಕ್ಕೂ ಅಡ್ಡಿ ಮಾಡಿದ್ದರು. ತಮ್ಮ ಬೆಂಬಲಿಗರನ್ನು ಸರ್ಕಾರದ ವಿರುದ್ಧ ಛೂ ಬಿಟ್ಟಿದ್ದರು. ಅತೃಪ್ತ ಶಾಸಕರನ್ನು ವಿಶೇಷ ವಿಮಾನದಲ್ಲಿ ಕಳುಹಿಸುವ ಮೂಲಕ ಸರ್ಕಾರದ ಪತನಕ್ಕೆ ಕಾರಣರಾಗಿದ್ದರು. ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಕಿಮ್ಮತ್ತು ಬೆಲೆ ನೀಡಿರಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.'