5/27/2019

ಸಮ್ಮಿಶ್ರ ಸರಕಾರದ ಮೊದಲ ಸಮನ್ವಯ ಸಮಿತಿ ಸಭೆ ಇಂದು

Font size -16+

'ಸುದ್ದಿಮೂಲ ವಾರ್ತೆ ಬೆಂಗಳೂರು, ಜೂ.13
ಸರ್ಕಾರ ಟೇಕ್ ಆ್ ಆಗುವ ಹಂತದಲ್ಲೇ ಸಚಿವ ಸ್ಥಾನಕ್ಕಾಗಿ ಕಿತ್ತಾಟ, ಖಾತೆ ಹಂಚಿಕೆ ಮತ್ತಿತರ ಸಮಸ್ಯೆಗಳಿಂದ ಕೆಂಗೆಟ್ಟಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸುಗಮ ಆಡಳಿತಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿಯ ಮೊದಲ ಮಹತ್ವದ ಸಭೆ ಗುರುವಾರ ನಡೆಯಲಿದೆ.
ನಿಗಮ ಮಂಡಳಿಗಳ ಮತ್ತು ಸಂಸದೀಯ ಕಾರ್ಯದರ್ಶಿಗಳ ನೇಮಕಾತಿ, ಬಾಕಿ ಉಳಿದಿರುವ ಖಾತೆಗಳ ಹಂಚಿಕೆ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರುವ ನಿರೀಕ್ಷೆಯಿದೆ.
ಹಿಂದಿನ ಸರ್ಕಾರದ ಕಾರ್ಯಕ್ರಮ ಸುಗಮವಾಗಿ ನಡೆಸಿಕೊಂಡು ಹೋಗುವ, ಹೊಸ ಕಾರ್ಯಕ್ರಮ ರೂಪಿಸುವ ಮತ್ತು ಎರಡೂ ಪಕ್ಷಗಳ ಪ್ರಣಾಳಿಕೆ ಒಟ್ಟುಗೂಡಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚೆ ನಡೆಯುವ ಸಂಭವವಿದೆ.
ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರ ಮೇಶ್ವರ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ ಸ್ವರೂಪ, ಮೈತ್ರಿ ಪಕ್ಷಗಳಲ್ಲಿ ಕಾಣಿಸಿಕೊಂಡಿರುವ ಭಿನ್ನಮತ ನಿವಾರಣೆ ಬಗ್ಗೆಯೂ ಸಮಿತಿ ಸಭೆಯಲ್ಲಿ ಸಮಾಲೋಚನೆಯಾಗಲಿದೆ.
ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿ, ಜೆಡಿಎಸ್‌ನಲ್ಲಿ ಖಾತೆಗಾಗಿ ಎದ್ದಿರುವ ಖ್ಯಾತೆ ಮತ್ತಿತರ ವಿಷಯಗಳು ಸಹ ಸಭೆಯಲ್ಲಿ ಅನೌಪಚರಿಕವಾಗಿ ಚರ್ಚೆಯಾಗುವ ಸಂಭವವಿದೆ.'