5/27/2019

ವ್ಯವಸ್ಥೆ ಪರಿಶೀಲಿಸಿ ಮೆಚ್ಚುಗೆ

Font size -16+

'ಸುದ್ದಿಮೂಲ ವಾರ್ತೆ, ಬಳ್ಳಾರಿ, ಜೂ.13
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರು ನಗರದ ಜಿಲ್ಲಾಸ್ಪತ್ರೆಗೆ ಬುಧವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಸ್ಪತ್ರೆಯಲ್ಲಿನ ವಿವಿಧ ವಾರ್ಡ್‌ಗಳನ್ನು ಪರಿಶೀಲಿಸಿದರು. ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಅಧ್ಯಕ್ಷರನ್ನು ಕರೆದೊಯ್ದು ಕಲ್ಪಿಸಲಾಗಿರುವ ಸೌಕರ್ಯಗಳ ಕುರಿತು ವಿವರಿಸಿದರು.
ಜಿಲ್ಲಾಸ್ಪತ್ರೆಯಲ್ಲಿನ ಎಲ್ಲಾ ಸೌಕರ್ಯಗಳನ್ನು ಪರಿಶೀಲಿಸಿದರು ಮತ್ತು ರೋಗಿಗಳೊಂದಿಗೆ ಸಂವಾದ ನಡೆಸಿ ಅವರಿಂದ ಮಾಹಿತಿ ಪಡೆದುಕೊಂಡರು.
ಇಲ್ಲಿ ಕಲ್ಪಿಸಲಾಗಿರುವ ಸೌಕ ರ್ಯಗಳ ಬಗ್ಗೆ ಮತ್ತು ಆಸ್ಪತ್ರೆಗೆ ದೊರಕಿರುವ ಕಾಯಕಲ್ಪ ಪ್ರಶಸ್ತಿ ಬಗ್ಗೆ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು 210 ಬೆಡ್‌ಗಳ ಆಸ್ಪತ್ರೆ ಇದಾಗಿದ್ದು, 500 ಹಾಸಿಗೆ ಆಸ್ಪತ್ರೆ ಯಾಗಿ ಪರಿವರ್ತಿಸುವಂತೆ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರಕಾರದ ಹಂತದಲ್ಲಿದೆ. ವೈದ್ಯ ಕೀಯ ಸಿಬ್ಬಂದಿಯ ಕೊರತೆಯೂ ಕಾಡುತ್ತಿದ್ದು,ತಾವು ಸರಕಾರದ ಮಟ್ಟದಲ್ಲಿ ಒತ್ತಡ ಹಾಕಿ ವ್ಯವಸ್ಥೆ ಮಾಡಿಸಿಕೊಡುವಂತೆ ಅವರು ಕೋರಿದರು.'